ಅಮರಾವತಿ:- ತಿರುಪತಿ ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ 7ಕ್ಕೆ ಏರಿಕೆ ಆಗುತ್ತಿದ್ದು, ಅಸ್ವಸ್ಥರ ಏರ್ಲಿಫ್ಟ್ಗೆ ಸಿಎಂ ಸೂಚನೆ ಕೊಟ್ಟಿದ್ದಾರೆ.
ಕೇಂದ್ರ ಗೃಹ ಸಚಿವರ ಭುಗಿಲೆದ್ದ ಆಕ್ರೋಶ: ಇಂದು ಶಾಲೆಗಳಿಗೆ ರಜೆ ಘೋಷಣೆ!
ಆಂಧ್ರಪ್ರದೇಶ ಸಿಎಂ ಅವರು ಡಿಜಿಪಿ, ಟಿಟಿಡಿ ಇಒ, ಜಿಲ್ಲಾಧಿಕಾರಿ, ಎಸ್ಪಿ ಅವರೊಂದಿಗೆ ಕಾಲ್ತುಳಿತದ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕೆಂಡಾಮಂಡಲರಾಗಿ, ಒಂದೇ ಒಂದು ಜೀವಹಾನಿಯಾಗಬಾರದೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಡೆಯಲು ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.
ಜ.10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ-ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ದರ್ಶನಕ್ಕೆ ಬಂದ ಭಕ್ತರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ತಂದಿದೆ. ಜೊತೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಗೊತ್ತಿದ್ದರೂ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ಗಾಗಿ ತಿರುಪತಿಯಲ್ಲಿ ಮುಗಿಬಿದ್ದಿದ್ದರಿಂದ ಈ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ