ದಿನಕರ್ ತೂಗುದೀಪ (Dinkar Thoogudeep) ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ.
ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಮಹಾ ಶಿವರಾತ್ರಿ ಹಬ್ಬದ ವೇಳೆಗೆ ಶೀರ್ಷಿಕೆ ಬಿಡುಗಡೆಯಾಗಲಿದೆ. ಕುತೂಹಲ ಮೂಡಿಸುವಂತಹ ಶೀರ್ಷಿಕೆಯನ್ನು (Title) ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ
ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಹಾಗೂ ದಿನಕರ್ ತೂಗುದೀಪ ಅವರ ಕಾಂಬಿನೇಶನ್ ನಲ್ಲಿ ಮೂಡಿಬರಲಿರುವ ಈ ಚಿತ್ರದ ಕುರಿತು ಅಭಿಮಾನಿ ವಲಯದಲ್ಲಿ ಹಾಗೂ ಚಿತ್ರೋದ್ಯಮದಲ್ಲಿ ಸಾಕಷ್ಟು ನಿರೀಕ್ಷೆಯಿದೆ. ಯಾವ ರೀತಿಯ ಕಥೆಯನ್ನು ನಿರ್ದೇಶಕರು ಹೇಳಬಹುದು ಎನ್ನುವ ಕುತೂಹಲವೂ ಇದೆ.