ದೆಹಲಿ: ಅನ್ನಭಾಗ್ಯ ಜಾರಿಗಾಗಿ ಅಕ್ಕಿ ಹೊಂದಿಸಲು ರಾಜ್ಯ ಸರ್ಕಾರ ಕಸರತ್ತು ನಡೆಸಿದೆ ಹಾಗೆ ಈ ವಿಚಾರವಾಗಿ ಕೇಂದ್ರ ನಾಯಕರನ್ನು ಭೇಟಿಯಾಗಲು ದೆಹಲಿಗೂ ಶಿಫ್ಟ್ ಆಗಿತ್ತು.ಈ ಹಿನ್ನೆಲೆಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್(Piyush Goyal) ಅವರನ್ನು ಭೇಟಿ ಮಾಡಿದರು.
ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದ್ರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ. ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದಾರೆ.

ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿಸದರು.
ಸ್ಟಾಕ್ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಂದು ಹೇಳಿದರು.
