ಬೆಂಗಳೂರು:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿದೆ. ಇಂದು 296 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, ಒಬ್ಬ ಸೋಂಕಿಗೆ ಬಲಿಯಾಗಿದ್ದಾನೆ.
50 ಜನರು ಗುಣಮುಖರಾಗಿದ್ದಾರೆ. 24 ಗಂಟೆಗಳಲ್ಲಿ 5,021 ಜನರಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. 20 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1245 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.