ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಆತಂಕ ಮನೆ ಮಾಡಿದ್ದು, ಇಂದು 61 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಆ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 1.95 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 30 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಕಳೆದ 24 ಗಂಟೆಯಲ್ಲಿ 3,123 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 863 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 156 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ಮೈಸೂರು 8, ಬೆಳಗಾವಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ಬಳ್ಳಾರಿ 2, ಚಾಮರಾಜನಗರ 2, ಶಿವಮೊಗ್ಗ 2, ವಿಜಯನಗರ 2, ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿವೆ.
ಕೊರೊನಾ ಬಳಿಕ ರಾಜಧಾನಿ ಬೆಂಗಳೂರಿನ ಶೇ 30 ರಷ್ಟು ಜನರಲ್ಲಿ ಗೊರಕೆ ಸಮಸ್ಯೆ ಕಾಣಿಸಿದೆ. ಇದು ಗೊರಕೆಗಷ್ಟೇ ಸೀಮಿತವಾಗದೆ, ಹೃದಯ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಬರುವ ಸಾಧ್ಯತೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು.