ಬೆಂಗಳೂರು:– ಕರ್ನಾಟಕದಲ್ಲಿ ವರುಣಾರ್ಭಟ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಇಂದು ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ನೈತಿಕತೆ ಪ್ರಶ್ನೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್
ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರಿದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಶಾಲೆ, PU ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಉಡುಪಿ ಡಿಸಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಜೊತೆಗೆ ನದಿ, ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ
ಉತ್ತರ ಕನ್ನಡ: ಭಾರತೀಯ ಹವಮಾನ ಇಲಾಖೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದ್ದು, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದ್ದಾರೆ.