ಶಾರುಖ್ ಖಾನ್ (Shah Rukh Khan) ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು (Song) ಬಿಡುಗಡೆಗೊಳ್ಳಲಿದೆ.
ಡಂಕಿ (Dunki) ಸಿನಿಮಾದ ರೋಮ್ಯಾಂಟಿಕ್ ನಂಬರ್ ಸಾಂಗ್ ಇಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.
ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.