ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಡಿ ಕೆಲಸ ಮಾಡುತ್ತಿದೆ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಬಂದಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇವತ್ತು ಮಹಿಳೆಯರು ವಾಕಿಂಗ್ ಹೋಗಲೂ ಭಯಪಡುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಕ್ರಿಮಿನಲ್ಗಳು ಹತ್ಯೆ ಮಾಡಿ ಬೇರೆಡೆ ಓಡಿ ಹೋಗಿ ಇನ್ನೊಬ್ಬರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರು ಹಿಡಿದು ಕೊಡುವಂಥ ಪರಿಸ್ಥಿತಿ ಬಂದಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟ ಕುರಿತು ಪೊಲೀಸ್ ವರಿಷ್ಠರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.
https://ainlivenews.com/tired-of-flies-at-home-use-this-trick-to-drive-them-away/
ರಾಜ್ಯದಲ್ಲಿ ಭಯಾನಕ ಅಪರಾಧಗಳ ಹೆಚ್ಚಳದ ಕುರಿತು ಗಮನ ಸೆಳೆಯಲಾಗಿದೆ. ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಆರೋಪಗಳಿದ್ದು, ಇದನ್ನು ತಪ್ಪಿಸಿ ಸ್ವತಂತ್ರವಾಗಿ ಕೆಲಸ ಮಾಡಲು ಕೋರಲಾಗಿದೆ ಎಂದು ವಿವರಿಸಿದರು.
ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕ ಅವಿನಾಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಸಹಿ ಮಾಡಿದ ಮನವಿಪತ್ರವನ್ನು ಇದೇವೇಳೆ ಸಲ್ಲಿಸಲಾಯಿತು.