ದಾವಣಗೆರೆ: ಶಾಲಾ ಬಾಲಕಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬಯಲಾಗಿದೆ. ಹೌದು ದಾವಣಗೆರೆ ತಾಲೂಕಿನ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ 10ಕ್ಕೂ ಅಧಿಕ ಬಾಲಕಿಯರು ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಶಾಲೆಯ ಸಮವಸ್ತ್ರದಲ್ಲಿ ಪೊರಕೆ ಹಿಡಿದು ಬಾಲಕಿಯರು ಶೌಚಾಲಯ ಸ್ವಚ್ಚ ಮಾಡಿದ್ದಾರೆ.
ಬಕೆಟ್ ನಲ್ಲಿ ನೀರು ತಂದು ಪೊರಕೆಯಿಂದ ಶೌಚಾಲಯ ಸ್ವಚ್ಚ ಗೊಳಿಸುತ್ತಿರುವ ಬಾಲಕಿಯರ ವಿಡಿಯೋ ವೈರಲ್ ಆಗಿದೆ. ಶಾಲೆಯ ಮುಖ್ಯಶಿಕ್ಷಕಿ ಹೈಸ್ಕೂಲ್ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದಾರೆ. ಸ್ವತಹ ಗಾಂಧಿಜಿಯೇ ತಮ್ಮ ಶೌಚಾಲಯ ಸ್ವಚ್ಚ ಮಾಡಿಕೊಳ್ಳುತ್ತಿದ್ದರು. ನೀವು ಸ್ವಚ್ಚಗೊಳಿಸಿ ಎಂದು ಮುಖ್ಯ ಶಿಕ್ಷಕಿ ಸೂಚನೆ ನೀಡಿದ್ದರಂತೆ. ಮಕ್ಕಳನ್ನ ಶೌಚಾಲಯ ಸ್ವಚ್ಚಗೊಳಿಸಲು ಬಳಸಿಕೊಳ್ಳುತ್ತಿರುವ ಶಾಲೆಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.