ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೆ ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ.
ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಒತ್ತಾಯಿಸಿದ್ದಾರೆ.