ನವದೆಹಲಿ: ಖಾಸಗಿ ವಾಹನಗಳು ಒಟ್ಟು ಟೋಲ್ ಸಂಗ್ರಹದಲ್ಲಿ ಕೇವಲ ಶೇ. 26 ರಷ್ಟಿವೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಸಂಗ್ರಹದ ಬದಲು ಮಾಸಿಕ ಮತ್ತು ವಾರ್ಷಿಕ ಪಾಸ್ಗಳನ್ನು ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಹಸಿರು ಬಣ್ಣಕ್ಕೆ ತಿರುಗಿದ ತುಂಗಭದ್ರಾ ಜಲಾಶಯ ನೀರು! ಜನರಲ್ಲಿ ಹೆಚ್ಚಾದ ಆತಂಕ!
ಸಂಚಾರಕ್ಕೆ ತೊಂದರೆಯಾಗದಂತೆ ಹಳ್ಳಿಗಳ ಹೊರಗೆ ಟೋಲ್ ಸಂಗ್ರಹಣಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಟೋಲ್ ಆದಾಯದ ಶೇ.74 ರಷ್ಟು ವಾಣಿಜ್ಯ ವಾಹನಗಳಿಂದ ಬರುತ್ತದೆ. ಖಾಸಗಿ ವಾಹನಗಳಿಗೆ ಮಾಸಿಕ ಅಥವಾ ವಾರ್ಷಿಕ ಪಾಸ್ಗಳನ್ನು ಪರಿಚಯಿಸುವ ಬಗ್ಗೆ ನಾವು ಪರಿಗಣಿಸುತ್ತಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರಕ್ಕೆ ಯಾವುದೇ ನಷ್ಟವಾಗುವುದಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಆರಂಭದಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆರಹಿತ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು FASTag ಜೊತೆಗೆ ಹೆಚ್ಚುವರಿ ಸೌಲಭ್ಯವಾಗಿ ಜಾರಿಗೆ ತರಲು ನಿರ್ಧರಿಸಿದೆ ಎಂದಿದ್ದಾರೆ.