ನವದೆಹಲಿ: ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಟೋಲ್ ದರ ಏರಿಕೆ ಆಗಲಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ.
18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು.
IAF Recruitment 2024: ಭಾರತೀಯ ವಾಯುಪಡೆಯಲ್ಲಿ ಭರ್ಜರಿ ಉದ್ಯೋಗವಕಾಶ..! ತಿಂಗಳಿಗೆ ಸಂಬಳ 56,000
ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್ ದರ ಪರಿಷ್ಕರಣೆಯಾಗುತ್ತಿರುತ್ತದೆ.