ಉತ್ತರ ಕನ್ನಡ: ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಶಾಲಾ, ಕಾಲೇಜಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಕೆಳಗೆ ಬಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಸಾವು!
ಮುಂಡಗೋಡ ಮತ್ತು ಹಲಿಯಾಳ ತಾಲೂಕು ಹೊರತುಪಡಿಸಿ ಕಾರವಾರ, ಕುಮಟಾ, ಅಂಕೋಲ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಒಟ್ಟು 5 ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಸೂಚನೆ ಹಿನ್ನಲೆ ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಸಕಲೇಶಪುರ, ಆಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ.