ಉತ್ತರ ಕನ್ನಡ: ಧಾರಾಕಾರ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ(ಸೋಮವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ.
ದೀರ್ಘಕಾಲ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳ ಪಟ್ಟಿ ನೀಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆ!
ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಡಿಸಿ ಲಕ್ಷ್ಮೀಪ್ರಿಯ ಅವರು ತಿಳಿಸಿದ್ದಾರೆ.
ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.14 ರಿಂದ 18 ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನಲೆ ಮುಂಜಾಗೃತವಾಗಿ ರಜೆ ಘೋಷಿಸಿ ಆದೇಶಿಸಲಾಗಿದೆ.