ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಮೆಗಾ ಹರಾಜಿಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಈಗಾಗಲೇ ಎಲ್ಲಾ ಪ್ರಾಂಚೈಸಿಗಳು ಜೆಡ್ಡಾದಲ್ಲಿದ್ದು ಕೊನೆಯ ಹಂತದ ಲೆಕ್ಕಾಚಾರ ಮಾಡುತ್ತಿವೆ. ನವೆಂಬರ್ 24, 25ರಂದು ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಎಲ್ಲಾ ತಂಡಗಳು ಈಗಾಗಲೇ ಬೇಕಾದ ಆಟಗಾರರನ್ನು ಉಳಿಸಿಕೊಂಡು ಉಳಿದ ಆಟಗಾರರನ್ನು ಬಿಡುಗಡೆ ಮಾಡಿದ್ದು ಬಲಿಷ್ಠ ತಂಡವನ್ನು ಕಟ್ಟಲು ಕೊನೆಯ ಕ್ಷಣದ ಕಸರತ್ತು ಮಾಡುತ್ತಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ರೀಟೈನ್ ಲಿಸ್ಟ್ ರಿಲೀಸ್ ಮಾಡಿದೆ. ಆರ್ಸಿಬಿ ಟೀಮ್ ಮೊದಲು ರೀಟೈನ್ ಮಾಡಿಕೊಂಡಿದ್ದು ವಿರಾಟ್ ಕೊಹ್ಲಿ. 2ನೇ ಆಯ್ಕೆ ರಜತ್ ಪಾಟಿದಾರ್ ಮತ್ತು 3ನೇ ಆಯ್ಕೆಯಾಗಿ ಯಶ್ ದಯಾಳ್ ಅವರನ್ನು ಉಳಿಸಿಕೊಂಡಿದೆ.
ಆರ್ಸಿಬಿ ತಂಡ ವಿರಾಟ್ ಕೊಹ್ಲಿ ಅವರಿಗೆ ಬರೋಬ್ಬರಿ 21 ಕೋಟಿ ನೀಡಿ ಉಳಿಸಿಕೊಂಡಿದೆ. ರಜತ್ ಪಾಟಿದಾರ್ ಅವರಿಗೆ 11 ಕೋಟಿ ಮತ್ತು ಯಶ್ ದಯಾಳ್ ಅವರಿಗೆ 5 ಕೋಟಿ ನೀಡಿ ರೀಟೈನ್ ಮಾಡಿಕೊಳ್ಳಲಾಗಿದೆ. ಈ ಮೂವರಿಗಾಗಿ ಆರ್ಸಿಬಿ ಸುಮಾರು 37 ಕೋಟಿ ಖರ್ಚು ಮಾಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೂವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ಇದೆ. ಎಂದರೆ ಮೆಗಾ ಹರಾಜಿಗೆ ಮುನ್ನ ಆರ್ಸಿಬಿ ಮೂವರು ಆಟಗಾರರ ಮೇಲೆ ಆರ್ಟಿಎಂ ಕಾರ್ಡ್ ಬಳಕೆ ಮಾಡಬಹುದು. ಆರ್ಟಿಎಂ ಕಾರ್ಡ್ ಮೂಲಕ ಹರಾಜಿನ ಸಂದರ್ಭದಲ್ಲಿ ತಂಡಕ್ಕೆ ಸೇರಿಸಿಕೊಳ್ಳಬಹುದು.
ಗರಿಷ್ಠ ಆರು ಆಟಗಾರರ ರೀಟೈನ್ಗೆ ಅವಕಾಶ ಇತ್ತು. ಅಲ್ಲದೆ ರೈಟ್ ಟು ಮ್ಯಾಚ್ ಕಾರ್ಡ್ ಬಳಕೆ ಮಾಡಬಹುದಾಗಿ ಸಹ ತಿಳಿಸಿತ್ತು. ಯಾವ ಟೀಮ್ ಎಷ್ಟು ಜನರನ್ನು ರೀಟೈನ್ ಮಾಡಿಕೊಂಡಿದೆ ಅನ್ನೋದರ ಮೇಲೆ ಆರ್ಟಿಎಂ ಕಾರ್ಡ್ ಸಂಖ್ಯೆ ಇರಲಿದೆ. ಆರ್ಸಿಬಿ ಕೇವಲ ಮೂವರು ಆಟಗಾರರಿಗೆ ಮಾತ್ರ ಮಣೆ ಹಾಕಿದ್ದು, ಇನ್ನೂ ಐಪಿಎಲ್ ಮೆಗಾ ಹರಾಜಿನಲ್ಲಿ 3 ರೈಟ್ ಟು ಮ್ಯಾಚ್ ಕಾರ್ಡ್ ಬಳಸುವ ಅವಕಾಶ ಹೊಂದಿದೆ.
ಆರ್ಸಿಬಿ ತಂಡ ಮೊಹಮ್ಮದ್ ಸಿರಾಜ್, ಗ್ಲೆನ್ ಮ್ಯಾಕ್ಸ್ವೆಲ್ ಮತ್ತು ವಿಲ್ ಜಾಕ್ಸ್ ಅವರನ್ನು ಬಿಡುಗಡೆ ಮಾಡಿದೆ. ಹರಾಜಿಗೂ ಮುನ್ನ ಈ ಮೂವರ ಮೇಲೆ ಆರ್ಸಿಬಿ ಆರ್ಟಿಎಂ ಬಳಸಲಿದೆ. ಆಗ ಸಿರಾಜ್, ಮ್ಯಾಕ್ಸ್ವೆಲ್, ವಿಲ್ ಜಾಕ್ಸ್ ಮೇಲಿನ ಹಕ್ಕು ಆರ್ಸಿಬಿ ಬಳಿಯೇ ಇರುತ್ತದೆ. ಯಾರಾದ್ರೂ ಇವರನ್ನು ಬಿಡ್ ಮಾಡಿದ್ರೆ ಅಷ್ಟು ದುಡ್ಡು ಕೊಟ್ಟು ಆರ್ಸಿಬಿ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು. ಹೀಗೆ ಸಿರಾಜ್, ಮ್ಯಾಕ್ಸ್ವೆಲ್, ವಿಲ್ ಜಾಕ್ಸ್ ಅವರನ್ನು ಉಳಿಸಿಕೊಳ್ಳಲಿದೆ.
ಭಾರತೀಯ ಕಾಲಮಾನ ಭಾನುವಾರ ಮಧ್ಯಾಹ್ನ 3 ಗಂಟೆಗೆ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆ ಆರಂಭವಾಗುತ್ತದೆ. ಭಾನುವಾರ ಮತ್ತು ಸೋಮವಾರ ಎರಡು ದಿನ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಪರ್ತ್ನಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಮೂರನೇ ದಿನದಾಟ 2.50ಕ್ಕೆ ಮುಗಿಯಲಿದ್ದು ಬಳಿಕ ಹರಾಜು ಆರಂಭಿಸಲಾಗುತ್ತದೆ. ಇದರಿಂದ ಭಾರತ ಕ್ರಿಕೆಟ್ ಅಭಿಮಾನಿಗಳು ಟೆಸ್ಟ್ ಮತ್ತು ಹರಾಜು ಎರಡನ್ನೂ ನೋಡಲು ಅವಕಾಶ ಸಿಗಲಿದೆ.
ಜೆಡ್ಡಾದಲ್ಲಿರುವ ಅಬಾಡಿ ಅಲ್ ಜೋಹರ್ ಅರೆನಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಮೆಗಾ ಹರಾಜು ಪ್ರಕ್ರಿಯೆ ಕೂಡ ನೇರ ಪ್ರಸಾರ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಟಿವಿಯಲ್ಲಿ ನೋಡುವವರು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಕೂಡ ನೇರಪ್ರಸಾರ ವೀಕ್ಷಿಸಬಹುದಾಗಿದೆ.