ನವದೆಹಲಿ: ಪಂಚರಾಜ್ಯ ಚುನಾವಣೆ ಹಿನ್ನೆಲೆ ಚುನಾವಣಾ ಪೂರ್ವ ಸಮೀಕ್ಷೆಗಳು ಬಿಡುಗಡೆಯಾಗಿವೆ. ಟೈಮ್ಸ್ ನೌ ಸಿ-ವೋಟರ್ ಸಮೀಕ್ಷೆ ನಡೆಸಿ ಉತ್ತರಪ್ರದೇಶ, ಗೋವಾ ಹಾಗೂ ಉತ್ತರಾಖಂಡ್ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿವೆ. ಪಂಜಾಬ್ನಲ್ಲಿ ಕೇಜ್ರಿವಾಲ್ರ ಆಮ್ ಆದ್ಮಿ ಪಾರ್ಟಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಕಾಂಗ್ರೆಸ್ ಎರಡನೇ ಸ್ಥಾನ ಪಡೆಯಲಿದೆ. ಮಣಿಪುರ ರಾಜ್ಯದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತೆ. ಆದ್ರೆ ಇಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟಫ್ ಫೈಟ್ ಇರಲಿದೆ ಅಂತಾ ಸಮೀಕ್ಷೆಯಲ್ಲಿ ತಿಳಿದುಬಂದಿದೆ.
