ರಾಮನಗರ: ಬೆಂಗಳೂರು ಹೊರವಲಯದ ರಾಮನಗರ ಜಿಲ್ಲೆ ಬಿಡದಿಯ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಯ ವಿಸ್ತರಣೆ ಘಟಕದ (TTTI) ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಶುಕ್ರವಾರ ಉದ್ಘಾಟಿಸಿದರು.
ಸಚಿವ ಮಂಕಾಳ ವೈದ್ಯ, ಸಂಸದ ಡಿ ಕೆ ಸುರೇಶ್, ಶಾಸಕ ಎಚ್ ಸಿ ಬಾಲಕೃಷ್ಣ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಟೊಯೋಟಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸುದೀಪ್ ದಾಲ್ವಿ, ಕಾರ್ಯನಿರ್ವಾಹಕ ಉಪಾಧ್ಯಕ್ಷ ಸ್ವಪನೇಶ್ ಮಾರು ಮತ್ತಿತರರು ಸಮಾರಂಭದಲ್ಲಿ ಭಾಗವಹಿಸಿದ್ದರು.