ಆನೇಕಲ್ :- ರಾಜಧಾನಿ ಬೆಂಗಳೂರಿನ ದೊಮ್ಮಸಂದ್ರದಲ್ಲಿ ಬುಲೆಟ್ ಬೈಕ್ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ಜರುಗಿದೆ.
ಟ್ರ್ಯಾಕ್ಟರ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು, ಈ ವೇಳೆ ಅವರ ಮೇಲೆ ಟ್ರ್ಯಾಕ್ಟರ್ ಹರಿದಿದ್ದರಿಂದ ದುರ್ಘಟನೆ ಸಂಭವಿಸಿದೆ.
ಟ್ರಾಕ್ಟರ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸರ್ಜಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.