ರಾಮನಗರ:- ಜಿಲ್ಲೆಯ ಕನಕಪುರ-ಸಾತನೂರು ರಸ್ತೆಯ ಜಕ್ಕೇಗೌಡನ ಗ್ರಾಮದಲ್ಲಿ ಕಬ್ಬಿಣ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಜರುಗಿದೆ.
ಕೊಲ್ಕತ್ತಾ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೊಬ್ಬ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಬಿಡಬ್ಲ್ಯುಎಸ್ಎಸ್ಬಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗೆ ಬಂದಿದ್ದ ಕಾರ್ಮಿಕರು, ಕನಕಪುರದಿಂದ ಜಕ್ಕೇಗೌಡನದೊಡ್ಡಿ ಕಡೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಇಬ್ಬರ ಮೇಲೆ ಕಬ್ಬಿಣದ ಕಂಬಿಗಳು ಬಿದ್ದಿದ್ದರಿಂದ ಅವರು ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಸಾತನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ