ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ಹಲವೆಡೆ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ವಾಹನ ಸವಾರರು, ಪಾದಚಾರಿಗಳು ಸೇರುವ ರಸ್ತೆ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಪೊಲೀಸರು ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲದಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದ್ದು, ಪೊಲೀಸರು ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಮಾರ್ಪಾಡು ಮಾಡಿದ್ದಾರೆ. ಎಂಜಿ ರೋಡ್, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರೋಡ್ ಹಾಗೂ ಚರ್ಚ್ ಸ್ಟ್ರೀಟ್ನಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಎಂ.ಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೊ ಹಾಲ್ ಜಂಕ್ಷನ್ ವರೆಗೆ ಬ್ರಿಗೇಡ್ ರಸ್ತೆಯಲ್ಲಿ ಕಾವೇರಿ ಎಂಪೋರಿಯಂನ ಜಂಕ್ಷನ್ನಿಂದ ಅಪೇರಾ ಜಂಕ್ಷನ್ ವರೆಗೆ ಚರ್ಚ್ ಸ್ಟ್ರೀಟ್ನಲ್ಲಿ ಬ್ರಿಗೇಡ್ ರಸ್ತೆಯ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್ ವರೆಗೆ ರೆಸ್ಟ್ ಹೌಸ್ ರಸ್ತೆಯಲ್ಲಿ ಮ್ಯೂಸಿಯಂ ರಸ್ತೆ ಜಂಕ್ಷನ್ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೆ ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ರಸ್ತೆ ಜಂಕ್ಷನ್ನಿಂದ ಮಹಾತ್ಮ ಗಾಂಧಿ ರಸ್ತೆಯ ಜಂಕ್ಷನ್ ವರೆಗೆ ವಾಹನ ನಿಲುಗಡೆ ಹಾಗೂ ಸಂಚಾರ ನಿರ್ಬಂಧಿಸಲಾಗಿದೆ.
ಯಾವೆಲ್ಲಾ ಮಾರ್ಗಗಳಲ್ಲಿ ಬದಲಾವಣೆ
ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೇಯೋ ಹಾಲ್ ಜಂಕ್ಷನ್ವರೆಗೆ
ಬ್ರಿಗೇಡ್ ರಸ್ತೆ, ಕಾವೇರಿ ಎಂಪೋರಿಯಂ ಜಂಕ್ಷನ್-ಅಪೇರಾ ಜಂಕ್ಷನ್ವರೆಗೆ
ಚರ್ಚ್ಸ್ಟ್ರೀಟ್, ಬ್ರಿಗೇಡ್್ ರಸ್ತೆ ಜಂಕ್ಷನ್ನಿಂದ ಮ್ಯೂಸಿಯಂ ರಸ್ತೆ ಜಂಕ್ಷನ್
ರೆಸ್ಟ್ಹೌಸ್ ರಸ್ತೆ, ಮ್ಯೂಸಿಯಂ ರಸ್ತೆ ಜಂಕ್ಷನ್ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್
ರೆಸಿಡೆನ್ಸಿ ಕ್ರಾಸ್ ರಸ್ತೆಯಲ್ಲಿ ರೆಸಿಡೆನ್ಸಿ ಜಂಕ್ಷನ್ನಿಂದ ಎಂ.ಜಿ.ರಸ್ತೆವರೆಗೆ