ಬೆಂಗಳೂರು:- ಬೆಂಗಳೂರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆ ಸಂಚಾರಿ ಪೊಲೀಸರು ಒಂದೇ ದಿನ ಸಾವಿರಕ್ಕೂ ಹೆಚ್ಚು ಕೇಸ್ ದಾಖಲು ಮಾಡಿದ್ದಾರೆ.
ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಹಾಗಾದ್ರೆ ಈ ಕಾಯಿಲೆಗಳು ಬರುವ ಸಾಧ್ಯತೆ
ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಟ್ರಾಫಿಕ್ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿದ್ದರು. ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ 1,055 ಪ್ರಕರಣಗಳು ದಾಖಲಾಗಿವೆ.
ಇವುಗಳಲ್ಲಿ 812 ವಾಹನ ಚಾಲಕರ ವಿರುದ್ಧ ಏಕಮುಖ ಸಂಚಾರ ಇರುವಲ್ಲಿ ನಿಯಮ ಉಲ್ಲಂಘಿಸಿ ಎದುರಿನಿಂದ ಬಂದ ಮತ್ತು ನಿರ್ಬಂಧಿತ ರಸ್ತೆಗಳಲ್ಲಿ ವಾಹನ ಚಲಾಯಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. 127 ಚಾಲಕರಿಗೆ ಫುಟ್ಪಾತ್ನಲ್ಲಿ ವಾಹನ ನಿಲುಗಡೆ ಮಾಡಿದ್ದಕ್ಕಾಗಿ ಒಟ್ಟು 64,000 ರೂ. ದಂಡ ವಿಧಿಸಲಾಗಿದೆ.