ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿ ಕೊಂಡ ಬಳಿಕ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ.ಹೊಸಪೇಟೆ ಮೂಲದ ಮುಸ್ಕಾನ್ (22) ಮೃತರು. 15 ದಿನಗಳ ಅಂತರದಲ್ಲಿ ಮೃತಪಟ್ಟ ಬಾಣಂತಿಯರ ಸಾವಿನ ಸಂಖ್ಯೆ 4ಕ್ಕೆ ಏರಿಕೆ ಯಾಗಿದೆ. ನ.10ರಂದು ಮುಸ್ಕಾನ್ ಅವರು ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ ಮಾಡಿಸಿಕೊಂಡಿದ್ದರು.
ಬಳಿಕ ಆರೋಗ್ಯ ದಲ್ಲಿ ಏಕಾಏಕಿ ಏರುಪೇರಾಗಿತ್ತು. ಬಳಿಕ ನ.11ರಂದು ಬಿಮ್ಸ್ಗೆ ದಾಖಲಿಸಲಾ ಗಿತ್ತು. ಬಿಮ್ಸ್ನಲ್ಲಿ 1 ದಿನ ಇದ್ದು ಚಿಕಿತ್ಸೆ ಪಡೆದಿದ್ದ ಮುಸ್ಕಾನ್, ಕಿಡ್ನಿ ಸಮಸ್ಯೆ ಹಿನ್ನೆಲೆಯಲ್ಲಿ ಡಯಾಲಿಸಿಸ್ ಮಾಡಿಸಲು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖ ಲಿಸಿದ್ದರು. ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.
ರೈತರೇ ಗಮನಿಸಿ.. ಪ್ರತಿ ಹೆಕ್ಟೇರ್ʼಗೆ 10,000 ರೂಪಾಯಿ ನೀಡಲಿದೆ ಈ ಯೋಜನೆ! ಇಂದೇ ಅರ್ಜಿ ಸಲ್ಲಿಸಿ
ಕಳೆದ ನ.7-13 ರವರೆಗೆ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾದ 9 ಬಾಣಂತಿ ಯರ ಪೈಕಿ ಮುಸ್ಕಾನ್ ಕೂಡ ಒಬ್ಬರು. ಈ ಮೊದಲು ಲಲಿತಮ್ಮ, ನಂದಿನಿ, ರೋಜಾ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಣಂತಿ ಸುಮಯಾ ಎಂಬುವರು ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.