ಮಂಡ್ಯ:- ಸಕ್ಕರೆ ನಾಡು ಮಂಡ್ಯದಲ್ಲಿ ದುರಂತ ಒಂದು ಸಂಭವಿಸಿದೆ. ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾರೆ.
ನಿಮಗೂ ಸರ್ಕಾರಿ ಕೆಲಸ ಬೇಕಾ!? ಕರ್ನಾಟಕದಲ್ಲಿದೆ 2.76 ಲಕ್ಷ ಹುದ್ದೆ! ನೀವು ತಿಳಿಯಲೇಬೇಕಾದ ವಿಚಾರ!
ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ಜರುಗಿದೆ. 30 ವರ್ಷದ ಜ್ಞಾನೇಶ್ ಮೃತ ಎಂಜಿನಿಯರ್. ಈತ ಕಳೆದ ಹಲವು ವರ್ಷಗಳಿಂದ ಕೆಸ್ತೂರು ಗ್ರಾಮದಲ್ಲಿ ವಾಸವಾಗಿದ್ದ.
ಮೃತ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಾಪ್ ಸ್ಟೇಟಸ್ನಲ್ಲಿ ʼWork Pressureʼ ಎಂದು ಹಾಕಿಕೊಂಡಿದ್ದ. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.