ವಿಜಯಪುರ : ವಿಜಯಪುರದಲ್ಲಿ ಹೋಳಿ ಹಬ್ಬದಂದೇ ಭೀಕರ ಅವಘಡವೊಂದು ಸಂಭವಿಸಿದೆ. ನೀರು ಕುಡಿಯಲು ಬಾವಿಗೆ ಇಳಿದಿದ್ದ ಬಾಲಕ ಕಾಲು ಜಾರಿ ನೀರು ಪಾಲಾಗಿದ್ದು, ಬಾಲಕನ ರಕ್ಷಿಸಲು ಹೋಗಿ ಬಾಲಕನ ಅಜ್ಜಿಯೂ ಸಹ ನೀರಿನಲ್ಲಿ ಮುಳುಗಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಗಸನಾಳ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಅಸಾದ್ ಮುಲ್ಲಾ (12) ಸಲೀಮಾ ಮುಲ್ಲಾ (55) ಮೃತ ಅಜ್ಜಿ ಹಾಗೂ ಮೊಮ್ಮಗ. ಹೊರ್ತಿ ಪೊಲೀಸರು ಇಬ್ಬರ ಶವ ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.