ಬೆಂಗಳೂರು:- ಆರೋಗ್ಯ ಇಲಾಖೆಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್.. ಕೋರ್ಟ್ ನಲ್ಲಿ ಇಂದು ನಡೆದಿದ್ದರ ಬಗ್ಗೆ ದರ್ಶನ್ ಪರ ವಕೀಲರು ಹೇಳಿದ್ದೇನು!?
ಕಳೆದ ವರ್ಷ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನ ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆಗೆ ಒತ್ತಡ ಪರಿಸ್ಥಿತಿಗಳನ್ನ ಎದುರಿಸಬೇಕಾಗಿ ಬಂದಿತ್ತು.
ಕಾರಣ 2016 ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ ಎಂಬುದನ್ನ ಮನಗಂಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು.
ಗ್ರೂಪ್ ಎ ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನ ಕೌನ್ಸಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜುಲೈ 31 ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ.