ಬೆಂಗಳೂರು:- ಸಾರಿಗೆ ಬಸ್ ಟಿಕೆಟ್ ದರ ಶೇಕಡಾ 15ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧಿಕೃತವಾಗಿ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, 2020ರಂದು ಬಸ್ ಟಿಕೆಟ್ ಹೆಚ್ಚಳ ಮಾಡಲಾಗಿತ್ತು. ಐದು ವರ್ಷದಲ್ಲಿ ಈಗ ಡೀಸೆಲ್ ದರ ಹೆಚ್ಚಳವಾಗಿದೆ. ಖರ್ಚು ವೆಚ್ಚ ಕೂಡ ಹೆಚ್ಚಿಗೆ ಆಗಿದೆ. ಸಿಬ್ಬಂದಿ ವೆಚ್ಚ ಕೂಡ ಶೇ.18ರಷ್ಟು ಏರಿಕೆಯಾಗಿದೆ. ಕಳೆದ 5-10 ವರ್ಷಗಳಿಂದ ಟಿಕೆಟ್ ದರ ಹೆಚ್ಚಿಸಿಲ್ಲ. ಸಂಬಳ ಮತ್ತು ಸಾರಿಗೆ ಸಂಸ್ಥೆ ಉಳಿಯಬೇಕಲ್ವಾ. ಆದಾಯ ಹೆಚ್ಚಳವಾದರೂ ಖರ್ಚು ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಆದರೆ ಶಕ್ತಿ ಯೋಜನೆಯಿಂದ ನಮಗೆ ಲಾಭ ಆಗಿದೆ. ಬಿಜೆಪಿ ಸರ್ಕಾರ ಸಾವಿರಾರು ಕೋಟಿ ರೂ. ಸಾಲ ಬಿಟ್ಟು ಹೋಗಿದೆ. ನಮ್ಮ ಸರ್ಕಾರದಲ್ಲಿ ವೇತನಕ್ಕೆ ಯಾವುದೇ ಸಮಸ್ಯೆ ಆಗಿಲ್ಲ. ನಮ್ಮ ಸರ್ಕಾರದಲ್ಲಿ ಟೈಂ ಸರಿಯಾಗಿ ಸಂಬಳ ಆಗುತ್ತಿದೆ. ಹಿಂದಿನ ಸರ್ಕಾರದಲ್ಲಿ ಸಂಬಳದ ಸಮಸ್ಯೆಯಾಗಿತ್ತು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬಸ್ ಟಿಕೆಟ್ ದರ ಕಡಿಮೆ ಇದೆ ಎಂದಿದ್ದಾರೆ.
ಹಿಂದನ ಸರ್ಕಾರದ ಸಾಲ ತೀರಿರುವ ಜವಾಬ್ದಾರಿ ಕೂಡ ಇದೆ. ಹತ್ತಿರ ಹತ್ತಿರ ಒಂದು ಸಾವಿರ ಕೋಟಿ ರೂ. ಆದಾಯ ಹೆಚ್ಚಾಗಿದೆ. ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಹೊಸ ವರ್ಷಕ್ಕೆ ಯಾವುದೇ ತೊಂದ್ರೆ ಆಗಲ್ಲ. ಮುಂದೆಯೂ ಮಾಡಬೇಕಿತ್ತು ಅಲ್ಲ, ಹೀಗಾಗಿ ಈಗ ಮಾಡಿದ್ದೇವೆ. ಅದರಲ್ಲಿ ಹೊಸ ವರ್ಷ ಅಂತೇನಿಲ್ಲ. ಮಹಿಳೆಯರಿಗೆ ಉಚಿತ ಆದರೆ ಪುರುಷರಿಗೆ ತೊಂಂದರೆ ಆಗುತ್ತದೆ ಎಂಬ ಪ್ರಶ್ನೆಗೆ, ಬಸ್ ಉಡಿಸಬೇಕೋ ಬೇಡ್ವೋ, ಎಲ್ಲವನ್ನ ನೋಡಬೇಕಾಗಿದೆ ಎಂದು ಹೇಳಿದ್ದಾರೆ.