ಬೆಂಗಳೂರು:-ನಟ ದರ್ಶನ್ ಅವರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದರಿಂದ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದರು.
ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಯಿತು. ಹೀಗಾಗಿ, ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಸದ್ಯ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದರು.
ಅಲ್ಲದೇ ಇದೇ ಕಾರಣದಿಂದ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಕೋರ್ಟ್ ಗೆ ಮನವಿ ಮಾಡಿ ಬೇಲ್ ಮೇಲೆ ಹೊರಗೆ ಬಂದಿದ್ದಾರೆ.
6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಕಳೆದ 4 ವಾರಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಪಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಇದೀಗ ಭಾರೀ ವೈರಲ್ ಆಗಿದೆ.
ಇನ್ನೂ ಮತ್ತೊಂದೆಡೆ ಮತ್ತೊಂದೆಡೆ ರೆಗ್ಯೂಲರ್ ಬೇಲ್ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಕೋರ್ಟ್ನಲ್ಲಿ ನಡೆಯುತ್ತಿದೆ. ಇಂದು ವಿಚಾರಣೆ ಮುಂದುವರಿಯಲಿದೆ, ಈ ನಡುವೆ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಜಾಲತಾಣದಲ್ಲಿ ಹರಿದಾಡುತ್ತಿದೆ.