ಬೆಂಗಳೂರು:- ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಮಲ್ಲೇಶ್ವರಂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕವಾಗಿ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.
ಅದೇ ರೀತಿ, ವಿಶೇಷ ವಿವಾಹ ಕಾಯ್ದೆ 1954 ರ ಅಡಿಯಲ್ಲಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆನ್ನು ಕೂಡ ಆನ್ಲೈನ್ ಮಾಡಲಾಗಿದೆ.
ಈ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೂ ಈ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತದೆ. ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್-ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು.
ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ನಲ್ಲಿ ಮಾಡಲಾಗಿದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಒದಗಿಸಿದ ನಂತರ, ಸಬ್ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ.