ವಿಜಯಪುರ:-ವಿಜಯೇಂದ್ರರಿಂದ ನನ್ನನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಯತ್ನಾಳ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವೆ ಮತ್ತೊಂದು ಸುತ್ತಿನ ಕದನ ಶುರುವಾಗಿದ್ದು, ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಆಕ್ರೋಶ ಹೊರ ಹಾಕಿದ್ದಾರೆ.
ವಕ್ಫ್ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ರೈತರ ಸಮಸ್ಯೆಗಳನ್ನು ಆಲಿಸಲು ವಿಜಯೇಂದ್ರ ರಚಿಸಿರುವ ಸಮಿತಿಯಲ್ಲಿ ತಾನು ಮತ್ತು ವಿಜಯಪುರ ಸಂಸದರ ಹೆಸರಿಲ್ಲ, ರೈತರಿಗಾಗಿ ಅಸಲು ಹೋರಾಟ ಮಾಡುತ್ತಿರುವ ತಮ್ಮನ್ನು ತುಳಿಯುವ ಪ್ರಯತ್ನವನ್ನು ವಿಜಯೇಂದ್ರ ಮಾಡುತ್ತಿದ್ದಾರೆ ಎಂದು ಯತ್ನಾಳ್ ಹೇಳಿದರು.