ಶಿವಮೊಗ್ಗ:- ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆಯೇ ಗಲಾಟೆ ನಡೆದಿದೆ.
ಇಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್; ನೀವು ಓದಲೇಬೇಕಾದ ಸ್ಟೋರಿ!
ಡೊಳ್ಳು ಬಾರಿಸಲು ಎರಡು ಸಮುದಾಯದವರು ಒಂದೇ ತಂಡಕ್ಕೆ ಡೊಳ್ಳು ಬಾರಿಸಲು ಆರ್ಡರ್ ಕೊಟ್ಟಿದ್ದರು. ಆದರೆ ಎರಡು ಸಮುದಾಯದವರು ಒಂದೇ ಸಮಯದಲ್ಲಿ ಗಣಪತಿ ತರುತ್ತಿದ್ದರು. ಈ ವೇಳೆ ನಮ್ಮ ಸಮುದಾಯದ ಗಣಪತಿ ಮೆರವಣಿಗೆಗೆ ಡೊಳ್ಳು ಬಾರಿಸುವವರು ಹಣ ಪಡೆದು ಬಂದಿಲ್ಲ ಎಂದು ಗಲಾಟೆ ನಡೆದಿದೆ. ಡೊಳ್ಳುನವರ ಮೇಲೆ ಕಲ್ಲು ತೂರಾಟ ನಡೆಸಿ, ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.
ಈ ವೇಳೆ ಮೆರವಣಿಗೆಯಲ್ಲಿದ್ದ ಗ್ರಾಮಸ್ಥರಿಗೂ ಗಾಯವಾಗಿದೆ. ಇದಕ್ಕೆ ಪ್ರತಿಯಾಗಿ ಇನ್ನೊಂದು ಗುಂಪಿನವರು ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ನಡೆಯುತ್ತಿದ್ದ ವೇಳೆ ಸ್ಥಳದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಘಟನೆಯಲ್ಲಿ ಪೊಲೀಸರು ಸೇರಿದಂತೆ 8-10 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೂ ಘಟನೆ ನಂತರ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಪ್ರತಿಷ್ಠಾಪಿಸಿರುವ ಎಲ್ಲಾ ಗಣೇಶ ಮೂರ್ತಿಯನ್ನು ಇಂದೇ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾರೆ.