ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ ಎಸ್ ಯಡಿಯೂರಪ್ಪಗೆ ಢವ, ಢವ ಶುರುವಾಗಿದೆ.
ಭ್ರಷ್ಟಾಚಾರ ಕೇಸ್ ನಲ್ಲಿ ಅಂದ್ರೆ ಬಿಡಿಎ ಹೌಸಿಂಗ್ ನಿರ್ಮಾಣ ಕೇಸ್ ನಲ್ಲಿ BSYಗೆ ಸಂಕಷ್ಟ ಎದುರಾಗಿದ್ದು, ಪ್ರಾಸಿಕ್ಯೂಷನ್ಗೆ ಕೋರಿ ರಾಜ್ಯಪಾಲರಿಗೆ ಕಡತ ರವಾನೆ ಮಾಡಲಾಗಿದೆ.
ಬಳ್ಳಾರಿಯ ಬಿಮ್ಸ್ನಲ್ಲಿ ನಾಲ್ವರು ಬಾಣಂತಿಯರ ಸಾವು ಪ್ರಕರಣ: ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗ!
ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಇಂದು ಸರ್ಕಾರ, ರಾಜ್ಯಪಾಲರಿಗೆ ಕಡತ ರವಾನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎಂದು ಬಿಎಸ್ವೈಗೆ ಢವಢವ ಶುರುವಾಗಿದೆ.
ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ಇಂದು ರಾಜ್ಯಪಲಾರಿಗೆ ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ಆದ್ರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದರ ಮೇಲೆ ಬಿಎಸ್ವೈ ಭವಿಷ್ಯ ನಿರ್ಧಾರವಾಗಲಿದೆ.