ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಧೋನಿಗೆ ಇದೀಗ ಹೈಕೋರ್ಟ್ ನೋಟಿಸ್ ನೀಡಿದೆ. ಜನವರಿಯಲ್ಲಿ ಧೋನಿ ತಮ್ಮ ಮಾಜಿ ಬಿಸಿನೆಸ್ ಪಾರ್ಟ್ನರ್ಗಳಾದ ಮಿಹಿರ್ ದಿವಾಕರ್ ಮತ್ತು ಸೌಮ್ಯ ಬಿಸ್ವಾಸ್ 15 ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.
‘ಎಂಎಸ್ ಧೋನಿ’ ಹೆಸರಿನಲ್ಲಿ ಭಾರತ ಮತ್ತು ವಿದೇಶಗಳಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸುವುದಾಗಿ ಧೋನಿ ಜತೆ ಅರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್ ಮೆಂಟ್ ಕಂಪನಿ ಒಪ್ಪಂದ ಮಾಡಿಕೊಂಡಿತ್ತು. ನಮ್ಮ ಒಪ್ಪಂದವು 2021ರಲ್ಲಿ ಕೊನೆಗೊಂಡಿದೆ.
Health Tips: ಈರುಳ್ಳಿ ತಿಂದಾಗ ಬಾಯಿ ವಾಸನೆ ಬರುತ್ತಾ..? ನಿವಾರಣೆಗೆ ಹೀಗೆ ಮಾಡಿ
ಹೀಗಿದ್ದೂ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ಕ್ರಿಕೆಟ್ ಅಕಾಡೆಮಿಗಳನ್ನು ತೆರೆಯುವುದನ್ನು ಮುಂದುವರೆಸಿದ್ದಾರೆ. ಇದರಿಂದ ನನಗೆ 15 ಕೋಟಿ ರೂಪಾಯಿ ನಷ್ಟ ಆಗಿದೆ ಎಂದು ಧೋನಿ ಆರೋಪಿಸಿದ್ದರು. ಜನವರಿ 5 ರಂದು ಧೋನಿ ತಮ್ಮ ಮಾಜಿ ಪಾಲುದಾರರ ವಿರುದ್ಧ ವಂಚನೆ ಕೇಸ್ ದಾಖಲಿಸಿದ್ದರು.
ಪ್ರಕರಣ ಸಂಬಂಧ ಜಾರ್ಖಂಡ್ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವಿಚಾರಣೆಯನ್ನು ಪ್ರಶ್ನಿಸಿ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ಜಾರ್ಖಂಡ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಲು ಧೋನಿಗೆ ಹಾಜರಾಗುವಂತೆ ಜಾರ್ಖಂಡ್ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣದಲ್ಲಿ ನಿಮ್ಮ ನಿಲುವು ತಿಳಿಸುವಂತೆ ಹೈಕೋರ್ಟ್ ಧೋನಿಗೆ ಸೂಚಿಸಿದೆ.