ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಶುರುವಾಗಿದ್ದು, ಮಹಿಳೆ ವೇಲ್ ಎಳೆದಿದ್ದ ಕೇಸ್ ಅನ್ನು ಬಿಜೆಪಿ ನೆನಪಿಸಿದೆ.
ಪ್ರೀತಿಯಿಂದ ಸಾಕಿ ಸಲಹಿದ್ದ ಮಾವುತನನ್ನೇ ಕೊಲೆಗೈದ ಆನೆ! ನಡೆದಿದ್ದೇನು?
ಸಿಎಂ ಸಿದ್ದರಾಮಯ್ಯ ಮಹಿಳೆ ವೇಲ್ ಎಳೆದು ಅಪಮಾನಿಸಿದ್ದಾರೆ ಎನ್ನಲಾದ 6 ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗಕ್ಕೆ ಆನ್ಲೈನ್ ಮೂಲಕ ಬಿಜೆಪಿ ಕಾರ್ಯಕರ್ತ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಅಂದರೆ 6 ವರ್ಷದ ಹಿಂದೆ, ಮೈಕ್ ಕಿತ್ತುಕೊಳ್ಳಲು ಹೋಗಿ ಮಹಿಳೆ ವೇಲ್ ಎಳೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ.ಮಂಜುನಾಥ್ರಿಂದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಗೆ ದೂರು ನೀಡಿದ್ದಾರೆ.
ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದಾರೆಂದು ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಮಹಿಳೆ ವೇಲ್ ಎಳೆದು ಅಪಮಾನಿಸಿದ್ದರು. ಆ ಮಹಿಳೆ ದೂರು ದಾಖಲಿಸಿದ್ದಾರೋ ಇಲ್ಲವೋ ಗೊತ್ತಿಲ್ಲ. ಅಲ್ಲದೇ ದೂರು ಸಲ್ಲಿಸದಂತೆ ಮಹಿಳೆಗೆ ಬೆದರಿಕೆ ಹಾಕಿರಬಹುದು.
ಸೀರೆ ಎಳೆದು ಅವಮಾನಿಸಿರುವ ವಿಡಿಯೋ ಸಹ ವೈರಲ್ ಆಗಿತ್ತು. ಕೂಡಲೇ ಸಿಎಂ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಬೇಕು. ತನಿಖೆ ಮಾಡಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ದೂರಿನ ಮೂಲಕ ಒತ್ತಾಯಿಸಲಾಗಿದೆ.