ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿದ್ದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತೀವ್ರ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ನಿರ್ಧಾರವ ಹಿಂಪಡೆಯುವ ಭರವಸೆ ವ್ಯಕ್ತಪಡಿಸಿದೆ.
“ಅಮೆರಿಕವು ಈ ನಿರ್ಧಾರವನ್ನು ಮರುಪರಿಶೀಲಿಸುತ್ತದೆ ಎಂದು ನಾವು ಭಾವಿಸುತ್ತೇವೆ ಮತ್ತು ಜಗತ್ತಿನಾದ್ಯಂತ ಲಕ್ಷಾಂತರ ಜನರ ಆರೋಗ್ಯ ಮತ್ತು ಯೋಗಕ್ಷೇಮದ ಪ್ರಯೋಜನಕ್ಕಾಗಿ USA ಮತ್ತು WHO ನಡುವಿನ ಪಾಲುದಾರಿಕೆಯನ್ನು ಕಾಪಾಡಿಕೊಳ್ಳಲು ರಚನಾತ್ಮಕ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ” ಎಂದು WHO ಹೇಳಿದೆ.
ಟ್ರಂಪ್ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಆದೇಶಕ್ಕೆ ಸಹಿ ಹಾಕಿದರು. WHO ಅಮೆರಿಕಕ್ಕೆ ಪಕ್ಷಪಾತ ಮಾಡುತ್ತಿದ್ದು, ಚೀನಾಗೆ ಸಹಾಯ ಮಾಡುತ್ತಿದೆ ಎಂದು ಟ್ರಂಪ್ ಆರೋಪಿಸಿ ದ್ದಾರೆ.
ಕೊರೋನಾ ಸಮಯದಲ್ಲಿ COVID-19 ಸಾಂಕ್ರಾಮಿಕ ರೋಗ ನಿರ್ವಹಣೆಗೆ ಸಂಬಂಧಿಸಿದಂತೆ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.