ಬೆಂಗಳೂರು: ಬೈರತಿ ಸುರೇಶ್ ಬಂಧನವಾದೊಡನೆ ಸತ್ಯ ಹೊರಕ್ಕೆ ಬರಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ಆಗ್ರಹಿಸಿದರು. ಮುಖ್ಯಮಂತ್ರಿಗಳು ತಮ್ಮ ಪರಮಾಪ್ತ, ಮುಡಾ ಚಯರ್ಮನ್ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು; ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಬೈರತಿ ಸುರೇಶ್ ಬಂಧನವಾದೊಡನೆ ಸತ್ಯ ಹೊರಕ್ಕೆ ಬರಲಿದೆ. ಅವರ ತನಿಖೆ ನಡೆಸಬೇಕಿದೆ. ತಪಾಸಣೆ ಮಾಡಬೇಕಿದೆ; ಅವರು ತಂದ ಕಡತಗಳ ವಿವರ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮೂತ್ರ ವಿಸರ್ಜನೆ ವೇಳೆ ಕೆಟ್ಟ ವಾಸನೆ ಬರುತ್ತಿದೆಯೇ..? ಹಾಗಾದ್ರೆ ಈ ಕಾಯಿಲೆಗಳ ಸೂಚನೆ ಇರಬಹುದು.!
ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿದ್ದಾರೆ. ಬಳಿಕ ಅಮಾನತು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯನವರು 2013ರಲ್ಲಿ ತಮ್ಮ ಕೇಸುಗಳಿಂದ ಹೊರಕ್ಕೆ ಬರಲು ಲೋಕಾಯುಕ್ತವನ್ನು ಮುಚ್ಚಿದ್ದರು. ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರರಹಿತರು? ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿವೆ ಎಂದು ಕೇಳಿದರು. ಅವನ್ನು ಸುಟ್ಟು ಹಾಕಲಾಗಿದೆ ಎಂದು ದೂರಿದರು.