ದಾವಣಗೆರೆ:- ರಾಜ್ಯದಲ್ಲಿರುವುದು ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಎಂದು ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ ಎಂದರು. ಹಿಜಾಬ್ ನಿಷೇಧ ವಾಪಸ್ ಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿರುವ ಎಂ.ಪಿ. ರೇಣುಕಾಚಾರ್ಯ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ಕೊಡುತ್ತೇವೆಂದು ತಿಳಿಸಿದ್ದಾರೆ.
ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು. ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ಕೊಡುತ್ತೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟ, ಬಟ್ಟೆ ನಮ್ಮ ಹಕ್ಕು ಎನ್ನುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ ಎಂದರು.