ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃಕ್ಷಮಾತೆ ತುಳಸಿ ಗೌಡ ವಿಧಿವಶರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ!
ಪರಿಸರವಾದಿ ತುಳಸಿ ಗೌಡ ಅವರು ಈವರೆಗೂ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು, ಬೃಹತ್ ಕಾಡನ್ನೇ ಬೆಳೆಸಿದ್ದಾರೆ. ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
12ನೇ ವಯಸ್ಸಿನಲ್ಲಿ ತುಳಸಿ ಗೌಡ ಅವರಿಗೆ ಮರಗಳ ಜೊತೆಗಿನ ಬಾಂಧವ್ಯ ಆರಂಭವಾಯ್ತು. ಬಳಿಕ ಮರಗಳ ಜೊತೆಯಲ್ಲೇ ನಿತ್ಯ ಒಡನಾಟ.. ಹೀಗಾಗಿ. ಇವರನ್ನು ‘ಅರಣ್ಯದ ಎನ್ಸೈಕ್ಲೋಪೀಡಿಯಾ’ ಎನ್ನುತ್ತಾರೆ. ಗಿಡ, ಮರ, ಬಳ್ಳಿ, ಅವುಗಳ ಜಾತಿ, ಯಾವ ಮರ ಹೇಗೆ ಬೆಳೆಯುತ್ತೆ, ಯಾವ ಗಿಡಕ್ಕೆ ಎಷ್ಟು ನೀರು ಹಾಕಬೇಕು, ಯಾವಾಗ ನೀರುಣಿಸಬೇಕು ಹೀಗೆ ತುಳಸಿ ಗೌಡ ಅವರಿಗೆ ತಿಳಿಯದ ಸಂಗತಿಗಳೇ ಇಲ್ಲ ಎನ್ನಲಾಗಿದೆ.