ಕೊಪ್ಪಳ:- ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಘಟನೆ ಜರುಗಿದೆ.
ಸರಣಿ ಅಪಘಾತ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂವರು ಸಾವು!
ನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮುಂದಾಗಿದ್ದಾರೆ.
ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಡಂಗುರ ಸಾರಿ ಎಚ್ಚರಿಕೆ ನೀಡಿದೆ. ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಟಿಬಿ ಬೋರ್ಡ್ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ಸಮೀಪಕ್ಕೆ ಮಕ್ಕಳನ್ನು, ಜಾನುವಾರುಗಳು ಹೋಗದಂತೆ ಎಚ್ಚರವಹಿಸಿ. ಟಿಬಿ ಡ್ಯಾಮ್ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಯಾರೂ ಕೂಡ ನದಿ ಪಾತ್ರಕ್ಕೆ ಹೋಗದಂತೆ ಟಿಬಿ ಡ್ಯಾಮ್ ಕೆಳಭಾಗದ ಕೊಪ್ಪಳ ತಾಲೂಕು, ಗಂಗಾವತಿ ತಾಲೂಕು, ಕಾರಟಗಿ ತಾಲೂಕಿನ ಗ್ರಾಮಗಳಲ್ಲಿ ಡಂಗುರ ಸಾರಿ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.
ಇನ್ನು ತುಂಗಭದ್ರಾ ಡ್ಯಾಂ ಸುತ್ತಮುತ್ತಲಿನ ಪ್ರದೇಶಕ್ಕೆ ಜನ ಸಂಚಾರ ನಿಷೇಧ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ವಿಜಯನಗರ ಜಿಲ್ಲಾಧಿಕಾರಿ ಎಂಎಸ್ ದಿವಾಕರ ಆದೇಶ ಹೊರಡಿಸಿದ್ದಾರೆ.
ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಹಲವಡೆ ಬಿರುಕುಗಳು ಉಂಟಾಗಿವೆ. ಕ್ರಸ್ಟ್ ಗೇಟ್ಗಳಿರೋ ಜಾಗದಲ್ಲಿ ಹಲವಡೆ ಸಣ್ಣ ಸಣ್ಣ ಬಿರುಕುಗಳಿವೆ. ಆದ್ರೂ ಅವುಗಳನ್ನು ದುರಸ್ತಿ ಮಾಡಲಾಗಿಲ್ಲ. ಬೇಸಿಗೆಯಲ್ಲಿ ಡ್ಯಾಂ ದುರಸ್ತಿ ಕೆಲಸ ಮಾಡಿದ್ದೇವೆ ಅಂತ ಡ್ಯಾಂ ಸಿಬ್ಬಂದಿ ಹೇಳ್ತಿದ್ದಾರೆ. ಹಾಗಾದರೆ ಬಿರುಕುಗಳು ಹೇಗೆ ಉಳಿದುಕೊಂಡವು? ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಗೇಟ್ ಕಿತ್ತುಹೋಗಿದೆ ಎಂದು ರೈತರು ಆರೋಪಿಸಿದ್ದಾರೆ.