ಗದಗ:- ಶಾಲೆಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗ್ಬೇಕು. ಯಾರೂ ಅಪೌಷ್ಟಿಕತೆಯಿಂದ ಬಳಲ್ಬಾರ್ದು ಅಂತಾ ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ಹಾಲಿನ ಪ್ಯಾಕೇಟ್ ನೀಡ್ತಿದೆ. ನೂರಾರು ಕೋಟಿ ರೂಪಾಯಿ ಕೂಡ ಖರ್ಚು ಮಾಡಲಾಗ್ತಿದೆ. ಆದ್ರೆ, ಗದಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಹೊಟ್ಟೆ ಸೇರಬೇಕಿದ್ದ ಹಾಲಿನ ಪೌಡರ್ ಖತರ್ನಾಕ್ ಖದೀಮರ ಕೈ ಸೇರ್ತಿವೆ.
19ರ ವಿದ್ಯಾರ್ಥಿನಿ ಮೇಲೆ 47 ವರ್ಷದ ಅಂಕಲ್ ಗೆ ಲವ್: ಮನನೊಂದು ಸೂಸೈಡ್ ಮಾಡಿಕೊಂಡ ಯುವತಿ!
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗದಗ ಜಿಲ್ಲೆಯ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಘಟನೆ ಸಂಬಂಧ ಸಂತೋಷ ಶಿಂಧೆ ಹಾಗೂ ತಾಜಾಹುಸೇನ್ ಎಂಬುವವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು, ಗದಗ ನಗರದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ನನ್ನು ಸಾಗಿಸುತ್ತಿದ್ದರು. ಇದರ ಖಚಿತ ಮಾಹಿತಿ ಪಡೆದ ಬೆಟಗೇರಿ ಪೊಲೀಸರು, ಶಿಕ್ಷಣ ಇಲಾಖೆ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಹಾಲಿನ ಪೌಡರ್ ನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ 1 ಲಕ್ಷ 12 ಸಾವಿರ ಮೌಲ್ಯದ 313 ಕೆಜಿ ಹಾಲಿನ ಪುಡಿ ಹಾಗೂ ಮಿನಿ ಲಾರಿಯನ್ನು ಸೀಜ್ ಮಾಡಲಾಗಿದೆ. ಘಟನೆ ಸಂಬಂಧ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.