ವಿಜಯಪುರ:- ಯುಗಾದಿ ಅಮಾವಾಸ್ಯೆಯಂದೇ ದೇವರ ಪಲ್ಲಕ್ಕಿಯೊಂದಿಗೆ ಸ್ನಾನ ಮಾಡಲು ತೆರಳಿದ ಇಬ್ಬರು ಬಾಲಕರು ನದಿ ಪಾಲಾದ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ಜರುಗಿದೆ.
ಕಾರಜೋಳ ಗ್ರಾಮದ ಸುದೀಪ (ಪಪ್ಪು) ದೊಡ್ಡಮನಿ (12), ಶ್ರೀಧರ ದೊಡ್ಡಮನಿ (10) ಎಂಬ ಬಾಲಕರು ನದಿಪಾಲಾದವರು ಎನ್ನಲಾಗಿದೆ.
ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಹುಚ್ಚಮ್ಮ ದೇವಿ ಜಾತ್ರಾ ಮಹೋತ್ಸವ ನಿಮಿತ್ಯ, ಕಾರಜೋಳ ಗ್ರಾಮದಿಂದ ಕೃಷ್ಣಾ ನದಿಗೆ ದೇವಿಯ ಪಲ್ಲಕ್ಕಿ ಹೊತ್ತು, ದೇವಿಯ ಸ್ನಾನ ಮಾಡಿಸಿಕೊಂಡು ಬರಲು ಗ್ರಾಮಸ್ಥರು ತೆರಳಿದ್ದರು ಈ ವೇಳೆ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಭೇಟಿ, ಇಬ್ಬರ ಬಾಲಕರ ಶವ ಹೊರಕ್ಕೆ ತೆಗೆದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಕೊಲ್ಲಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.