ತುಮಕೂರು:-ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಪೊಲೀಸ್ ಪೇದೆ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟ ಬಳಿ ಜರುಗಿದೆ.
ಮಹೇಶ್,ಚಂದ್ರಯ್ಯ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿಗಳು. ಮೃತ ಮಹೇಶ್,ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಎನ್ನಲಾಗಿದೆ. ನಿನ್ನೆ ತಡರಾತ್ರಿ ಸಂಬಂಧಿಗಳ ಮದುವೆಗೆ ಮೂವರು ಬಂದಿದ್ದರು. ಮದುವೆ ಮುಗಿಸಿ ಬೈಕ್ ನಲ್ಲಿ ವಾಪಸ್ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಮೇಲೆ ಬಿದ್ದು ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿದ್ದ ಮತ್ತೋರ್ವ ಗಾಯಾಳು ಭರತ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.