ನೆಲಮಂಗಲ: ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವು ಹಾಗೂ ಮೂವರಿಗೆ ಗಾಯವಾಗಿರುವ ಘಟನೆ ಜರುಗಿದೆ.
ಮಾದಾವರ ಬಳಿಯ ನೈಸ್ ಟೋಲ್ ಬಳಿ ಲಾರಿ ಕಾರು ನಡುವೆ ಅಪಘಾತ ಸಂಭವಿಸಿದೆ. ಆವರಿಸಿದ್ದ ದಟ್ಟವಾದ ಮಂಜು ರಸ್ತೆ ಕಾಣದೆ ಅಪಘಾತ ಸಂಭವಿಸಿದೆ. ಪ್ರವಾಸಕ್ಕೆ ತೆರಳಿ ವಾಪಸ್ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಬದಿ ಕುಳಿತಿದ್ದ ಮಂಜುನಾಥ್ ಹಾಗೂ ಕಾರು ಚಾಲಕ ಸ್ಥಳದಲ್ಲಿ ಸಾವನ್ನಪ್ಪಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ನೆಲಮಂಗಲ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.