ಬೆಂಗಳೂರು: ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಕೋವಿಡ್ ಸಾಂಕ್ರಾಮಿಕ ಕಳೆದು ನಾಲ್ಕು ವರ್ಷದ ಬಳಿಕ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್ಎಂಪಿವಿ) ಎಂಬ ಮತ್ತೊಂದು ವೈರಸ್ ಇದೀಗ ಆತಂಕ ಮೂಡಿಸುತ್ತಿದೆ. ಕೊರೊನಾ ವೈರಸ್ ಲಕ್ಷಣಗಳನ್ನೇ ಹೊಂದಿರುವ ಈ ಸೋಂಕು ಈಗಾಗಲೇ ನೆರೆಯ ದೇಶದಲ್ಲಿ ಆಂತಕ ಹೆಚ್ಚಿಸಿದೆ.
ಇದೀಗ ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ (HMPV) ವೈರಸ್ ದೃಢಪಟ್ಟಿದೆ. ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ.
Vastu Tips: ಅಪ್ಪಿ ತಪ್ಪಿಯೂ ಚಪ್ಪಲಿಗಳನ್ನು ತಲೆಕೆಳಗಾಗಿ ಇಡಲೇಬಾರದು..! ಯಾಕೆ ಗೊತ್ತಾ..?
ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ. ಆದರೆ, ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವೈರಸ್ ಪ್ರಕರಣಗಳ ಸುದ್ದಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಆರೋಗ್ಯ ಇಲಾಖೆಯು ತುರ್ತು ಸಭೆಯನ್ನು ಕರೆದಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಹಿಂದೆ ಕೋವಿಡ್ನಂತೆಯೇ ಈ ಸೋಂಕು ಕೂಡ ಅಪಾಯಕಾರಿ ಎಂದು ತಜ್ಞರು ಎಚ್ಚರಿಕೆ ನೀಡಿರುವ ಕಾರಣ ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.