ಗದಗ:- ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಜೇಂದ್ರಗಡ-ಕುಷ್ಟಗಿ ರಸ್ತೆಯಲ್ಲಿ ಜರುಗಿದೆ.
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾದ ಹಸನ್ಸಾಬ್ (30) ದಾವಲ್ಸಾಬ್(28) ಮೃತ ದುರ್ದೈವಿಗಳು. ಸಿಂಧನೂರನಿಂದ ಗಜೇಂದ್ರಗಡಕ್ಕೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಗಜೇಂದ್ರಗಡ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.