ಬೆಂಗಳೂರು: ಸಂಪು ಶುಚಿಗೊಳಿಸುವಾಗ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಯಿ ಗಾರ್ಮೆಂಟ್ಸ್ ನಲ್ಲಿ ನಡೆದಿದೆ. ಇನ್ನು ತಮಿಳುನಾಡು ಮೂಲದ ಶಶಿಕುಮಾರ್ (51)ಮತ್ತು ಆಂಧ್ರ ಮೂಲದ ಆನಂದ್ (41) ಮೃತರು ಎನ್ನಲಾಗಿದೆ. ಹೌದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಶಾಹಿ ಗಾರ್ಮೆಂಟ್ಸ್ ನಲ್ಲಿ,
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ನೆನ್ನೆ ಸಂಜೆ ಸಂಪ್ ಕ್ಲೀನ್ ಮಾಡಲು ಮುಂದಾಗಿದ್ದರು .ಅಲ್ಲದೆ ಸಂಪ್ ಒಳಗೆ ಇಬ್ರು ಇಳಿದಿದ್ದರು ಕಾರ್ಮಿಕರು ಸಂಪ್ ಕ್ಲೀನಿಂಗ್ ಮಾಡುವ ವೇಳೆ ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದು ಕಾರ್ಮಿಕರು ಸಾವನ್ನಪ್ಪಿದ್ದಾರೆ..ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು ಇನ್ನು ಘಟನೆಗೆ ಪ್ರಮುಖ ಕಾರಣ ಏನೆಂಬುದು ಪೊಲೀಸ್ ತನಿಕೆಯಲ್ಲಿ ತಿಳಿಯಬೇಕಾಗಿದೆ.. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..