ಉಡುಪಿ:- ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ ಆಗಿದ್ದಾರೆ.
BPL ಫಲಾನುಭವಿಗಳಿಗೆ ಬಿಗ್ ಶಾಕ್: ಏಕಾಏಕಿ 60,000ಕ್ಕೂ ಹೆಚ್ಚು ಕಾರ್ಡ್ ಎಪಿಎಲ್ಗೆ ಶಿಫ್ಟ್!
ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್ಕೌಂಟರ್ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ