ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನೀಡಬಾರದು ಎಂಬ ಹೇಳಿಕೆ ವಿಚಾರವಾಗಿ ಪೊಲೀಸರು ಕಳುಹಿಸಿರುವ ನೋಟಿಸ್ ಗೆ ಚಂದ್ರಶೇಖರ್ ಸ್ವಾಮಿ ಪತ್ರ ಬರೆದಿದ್ದಾರೆ. ಸದ್ಯ ಅನಾರೋಗ್ಯದ ಕಾರಣದಿಂದಾಗಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿತ್ತಿಲ್ಲ ಎಂದು ಉಪ್ಪಾರಪೇಟೆ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ..?
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ವೈದ್ಯರು ಹತ್ತು ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಒಂದು ವೇಳೆ ಗುಣಮುಖರಾದಲ್ಲಿ ಡಿಸೆಂಬರ್ 18 ರಂದು ವಿಚಾರಣೆಗೆ ಹಾಜರಾಗುತ್ತೇವೆ. ಇಲ್ಲವೇ ತನಿಖಾಧಿಕಾರಿಗಳೇ ಮಠಕ್ಕೆ ಬಂದು ಹೇಳಿಕೆ ಪಡೆಯಲು ನಮ್ಮ ಅಭ್ಯಂತರ ಏನೂ ಇಲ್ಲ. ಈಗಾಗಲೇ ತಮ್ಮ ಹೇಳಿಕೆಗೆ ನಾವಯ ವಿಷಾದ ವ್ಯಕ್ತಪಡಿಸಿದ್ದೇವೆ. ಸಮಾಜದ ಸ್ವಾಸ್ಥ್ಯದ ದೃಷ್ಟಿಯಿಂದ ಪ್ರಕರಣ ಬೆಳೆಸದೆ ಇಲ್ಲಿಗೆ ಮುಕ್ತಾಯಗೊಳಿಸಬೇಕೆಂದು ಮನವಿ ಮಾಡುತ್ತೇನೆ” ಎಂದು ಪತ್ರದಲ್ಲು ಬರೆದಿದ್ದಾರೆ.
ಇನ್ನೂ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರವಾಗಿ ಚಂದ್ರಶೇಖರ್ ಸ್ವಾಮೀಜಿ ಮಾತನಾಡಿ, ಕ್ಷಮೆ ಕೇಳಿದ ಮೇಲೂ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ನನಗೆ ಹುಷಾರಿಲ್ಲ, ಎಲ್ಲಿಗೂ ಹೋಗುವುದಕ್ಕೆ ಆಗುತ್ತಿಲ್ಲ. ಹೀಗಾಗಿ ನಾನು ಇಂದು ವಿಚಾರಣೆಗೆ ಹೋಗುವುದಕ್ಕೆ ಆಗಲ್ಲ. ಮಠದವರೆಗೂ ಬಂದು ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ಮಠಕ್ಕೆ ಬಂದರೆ ಹೇಳಿಕೆ ಕೋಡುತ್ತೇನೆ ಎಂದರು.