ಬೆಂಗಳೂರು:- ವೈಟ್ ಟಾಪಿಂಗ್ ಪೂರ್ಣಗೊಳ್ಳದ ಹಿನ್ನೆಲೆ, ಬೆಂಗಳೂರಿನ ಈ ರಸ್ತೆಯಲ್ಲಿ ನಿತ್ಯವೂ ಟ್ರಾಫಿಕ್ ಕಿರಿ ಕಿರಿ ಆಗುತ್ತಿದೆ.
ಸುಲ್ತಾನ್ಪೇಟೆ ಮತ್ತು ಚಿಕ್ಕಪೇಟೆ ಜಂಕ್ಷನ್ಗಳ ನಡುವಿನ ಬಿವಿಕೆ ಅಯ್ಯಂಗಾರ್ ರಸ್ತೆಯ 300 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವೈಟ್ಟಾಪ್ ಯೋಜನೆ ಏಳು ತಿಂಗಳಿಂದ ಭಾಗಶಃ ಸ್ಥಗಿತಗೊಂಡಿದೆ. ಇದರಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಸಹ ಉಂಟಾಗುತ್ತಿದೆ.
ಅಪೂರ್ಣ ಕಾಮಗಾರಿ ಜಾಗದಲ್ಲೀಗ ಬೀದಿ ಬದಿಯ ಅಕ್ರಮ ಅಂಗಡಿಗಳು ತಲೆ ಎತ್ತಿವೆ. ಇದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ಕಾಯಂ ವ್ಯಾಪಾರಿಗಳು ಅಸಮಾಧಾನ ತೋಡಿಕೊಂಡಿದ್ದಾರೆ.
ಕಳೆದ ತಿಂಗಳಷ್ಟೇ ರಸ್ತೆಯ ಒಂದು ಬದಿಯ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಇನ್ನೊಂದು ಬದಿ ನಿರ್ಮಾಣ ಹಂತದಲ್ಲಿದೆ. ಸ್ಥಳೀಯ ಮಾರಾಟಗಾರರು ಮತ್ತು ಅಂಗಡಿ ಮಾಲೀಕರು ಈ ಬಗ್ಗೆ ಹತಾಶೆ ವ್ಯಕ್ತಪಡಿಸಿದ್ದಾರೆ
ಕಾರ್ಮಿಕರ ಅನಿಯಮಿತ ಹಾಜರಾತಿ ಮತ್ತು ನಿಧಾನಗತಿಯ ಪ್ರಗತಿಯಿಂದ ತೊಂದರೆಯಾಗುತ್ತಿದೆ ಎಂದು ಅಂಗಡಿ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.