ಕೋಲ್ಕತ್ತಾ:- ಇಲ್ಲಿನ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಬಂದಿದ್ದ ಮಹಿಳೆಯ ಬಟ್ಟೆ ಬಿಚ್ಚಿ ವಿಡಿಯೋ ಮಾಡಿರುವ ಅಮಾನವೀಯ ಘಟನೆ ವರದಿಯಾಗಿದೆ.
ಮಹಿಳೆ ತನ್ನ ಮಗುವಿಗೆ ಚಿಕಿತ್ಸೆ ಕೊಡಿಸಲು ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು, ಮಹಿಳೆ ಕೋಲ್ಕತ್ತಾದ ಅಲಿಪುರ ಪ್ರದೇಶದ ನಿವಾಸಿಯಾಗಿದ್ದಾರೆ. ಆಕೆಗೆ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತೆಯೊಬ್ಬರು ಕಿರುಕುಳ ನೀಡಿದ್ದಾರೆ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ ಆರೋಪಿಯನ್ನು 26 ವರ್ಷದ ತನಯ್ ಪಾಲ್ ಎಂದು ಗುರುತಿಸಲಾಗಿದೆ. ಆತ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದಾನೆ, ಮಕ್ಕಳ ವಾರ್ಡಿಗೆ ತೆರಳಿ ಮಲಗಿದ್ದ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸತೊಡಗಿದ. ಒತ್ತಾಯಪೂರ್ವಕವಾಗಿ ಆಕೆಯ ಬಟ್ಟೆಯನ್ನು ತೆಗೆದು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು ಪಾಲ್ ಅವರ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.