ಬೆಂಗಳೂರು: ಬಳ್ಳಾರಿ ಗಣಿಧಣಿಗಳ ಕಾಳಗ ದಿನಕ್ಕೊಂದು ಸ್ಟಿಸ್ಟ್ ಅಂಡ್ ಟರ್ನ್ ಪಡೆದುಕೊಳ್ತಿದೆ. ಶ್ರೀರಾಮುಲು ಪಕ್ಷ ಬಿಡುವ ಮಾತನಾಡಿದ್ದು, ಕೇಸರಿ ಪಡೆಗೆ ನುಂಗಲಾಗ ಬಿಸಿ ತುಪ್ಪವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಹೈಕಮಾಂಡ್ ರಾಮುಲರನ್ನು ಸಮಾಧಾನ ಮಾಡಲು ಮುಂದಾಗಿದೆ. ರಾಮುಲುರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆಗೆ ಬಿಜೆಪಿ ಹೈಕಮಾಂಡ್ ಪ್ಲಾನ್ ಮಾಡಿರೋದು ರಾಮುಲು ಆಪ್ತ ಮೂಲಗಳಿಂದ ತಿಳಿದು ಬಂದಿದೆ.
ಅದಲ್ಲದೆ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಎಷ್ಟೇ ಕರೆ ಮಾಡಿ ಕರೆದರೂ ಪಕ್ಷದ ನಾಯಕರಿಂದ ಶ್ರೀರಾಮುಲು ದೂರವೇ ಉಳಿಯುತ್ತಿದ್ದಾರೆ. ಸದ್ಯ ಪಕ್ಷದಲ್ಲಿ ಯಾವುದೇ ಹುದ್ದೇ ಇಲ್ಲ, ವಿಧಾನಸಭೆ ಮತ್ತು ಲೋಕಸಭೆ ಎರಡರಲ್ಲೂ ಸೋತಿರೋ ಶ್ರೀರಾಮುಲು, ಜೆ.ಪಿ ನಡ್ಡಾ , ಅಮಿತ್ ಶಾ ದೆಹಲಿಗೆ ಬರುವಂತೆ ಸೂಚನೆ ನೀಡಿದ ಹಿನ್ನೆಲೆ ದೆಹಲಿ ಚುನಾವಣೆ ಮುಗಿದ ಬಳಿಕ ಹೈಕಮಾಂಡ್ ಭೇಟಿಯಾಗಲು ನಿರ್ಧಾರ ಮಾಡಿದ್ದಾರೆ.
Job Search: ಹೈಕೋರ್ಟ್ʼನಲ್ಲಿ ಭರ್ಜರಿ ಉದ್ಯೋಗಾವಕಾಶ..! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಅಸ್ತಿತ್ವದ ಪ್ರಶ್ನೆ ಹಾಗೂ ಅಸ್ತಿತ್ವದ ಉಳಿವಿನ ಹೊರಾಟದಲ್ಲಿರುವ ರಾಮುಲುರಿಂದ ರಾಜ್ಯ ಸಭಾಸದಸ್ಯರನ್ನಾಗಿ ಮಾಡುವಂತೆ ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಮತ್ತೊಮ್ಮೆ ಸಕ್ರಿಯರಾಗಿ ಪಕ್ಷ ಕಟ್ಟಲು, ತಮ್ಮನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡುವಂತೆ ಬೇಡಿಕೆ ಇಡಲಿದ್ದಾರೆ. ಮೊನ್ನೆ ಆಂಧ್ರದ ರಾಜ್ಯಸಭೆ ಸದಸ್ಯ ವೈಎಸ್ಆರ್ಪಿ ಪಕ್ಷದ ವಿಜಯ ಸಾಯಿರೆಡ್ಡಿ ರಾಜೀನಾಮೆ ನೀಡಿದ್ದಾರೆ.
ವಿಜಯ ಸಾಯಿ ರೆಡ್ಡಿಯವರ 4 ವರ್ಷದ ಅವಧಿ ಇನ್ನೂ ಬಾಕಿ ಇರೋ ಹಿನ್ನೆಲೆ ಆಂಧ್ರ ಕೋಟಾದಡಿ ರಾಜ್ಯಸಭೆ ಮಾಡುವಂತೆ ಮನವಿ ಮಾಡಲಿದ್ದಾರಂತೆ. ಈ ಬಗ್ಗೆ ಸೂಕ್ಷ್ಮವಾಗಿ ರಾಜ್ಯ ಮುಖಂಡ ಮೂಲಕ ಸಂದೇಶ ನೀಡಿರುವ ರಾಮುಲು, ದೆಹಲಿ ಭೇಟಿ ವೇಳೆ ಈ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.